ಮಾರ್ಚ್ 13, 2014

ನೀ ಮಾಯೆಯೊಳಗೊ

ಕನಕದಾಸರು ಬರೆದಿರುವ "ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ" ನನ್ನನ್ನು ಬಹುವಾಗಿ ಕಾಡಿದ ಕೀರ್ತನೆ. ಅದನ್ನು ಇಲ್ಲಿ ಪ್ರಸ್ತುತ ಪಡಿಸಿದ್ದೇನೆ.


ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ
ನೀ ದೇಹದೊಳಗೊ ನಿನ್ನೊಳು ದೇಹವೊ||

ಬಯಲು ಆಲಯದೊಳಗೊ ಆಲಯವು ಬಯಲೊಳಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ || 1 ||

ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಗಳೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ || 2 ||

ಕುಸುಮದೊಳು ಗಂಧವೊ ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಆಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ || 3 ||


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ